ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಕ್ರೈಸ್ಟ್‌ಕಿಂಗ್ ಸಂಸ್ಥೆಯ ವಿದ್ಯಾರ್ಥಿ

ಕಾರ್ಕಳ: ಉಡುಪಿ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ದ್ವಿತೀಯ ವಾಣಿಜ್ಯ ವಿಭಾಗದ ರಿಹಾನ್ ಶೇಖ್ ಅವರು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು ಇವರ ಸಹಯೋಗದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಈ ಯಶಸ್ಸು ಕೇವಲ ವ್ಯಕ್ತಿಗತ ಸಾಧನೆಯಷ್ಟೇ ಅಲ್ಲ, ಬದಲಾಗಿ ಕಾಲೇಜಿನ ಪಠ್ಯೇತರ ಮತ್ತು ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಹೇಗೆ ಅವಕಾಶ ಮಾಡಿಕೊಡುತ್ತಿವೆ ಎಂಬುದಕ್ಕೆ ಒಂದು ಉದಾಹರಣೆಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಹಾಗೂ ಶಿಕ್ಷಕವರ್ಗ ರಿಹಾನ್ ಅವರನ್ನು ಅಭಿನಂದಿಸಿದ್ದು, ಭವಿಷ್ಯದಲ್ಲೂ ಅವರು ಇಂತಹ ಸಾಧನೆಗಳನ್ನು ಮಾಡಲು ಶುಭ ಹಾರೈಸಿದ್ದಾರೆ.

error: Content is protected !!