‘ಪೋಸ್ಟ್ ಕಾರ್ಡ್’ ಮಹೇಶ್ ವಿಕ್ರಂ ಹೆಗ್ಡೆ ಬಂಧನ

 

ಮಂಗಳೂರು: ಫೇಸ್‌ಬುಕ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫೋಟೊ ಬಳಸಿ, ಕೋಮು ಪ್ರಚೋದನೆ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್‌ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧಿಸಲಾಗಿದೆ.

ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ ಪಿಎಸ್ಸೈ ಕೃಷ್ಣಪ್ಪ ಎಂಬವರ ದೂರಿನಡಿ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಲಾಗಿತ್ತು. ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ಸೋಮವಾರದ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಫೋಟೋವನ್ನು ಬಳಸಿ ಕೋಮು ಪ್ರಚೋದನೆ ಆರೋಪ ಇವರ ಮೇಲಿದೆ. ʼಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ. ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂಥಹ ಪ್ರಕರಣ ಮರುಕಳಿಸಲ್ಲ’ ಎಂದು ಪೋಸ್ಟ್ ಹಾಕಿದ್ದರು.

ಎರಡು ಧರ್ಮಗಳ ನಡುವೆ ವೈರತ್ವ ಮತ್ತು ದ್ವೇಷ ಭಾವನೆ ಮೂಡಿಸಿ ಕೋಮುಗಲಭೆ ಸೃಷ್ಟಿಸುವಂತಹ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಹದಗೆಡಿಸುವ ಉದ್ದೇಶದಿಂದ ಪೋಸ್ಟ್ ಹಾಕಿದ ಆರೋಪದ ಮೇಲೆ ಬಿಎನ್ಎಸ್ 353(2) ಅಡಿ ಸೆ.9ರಂದು ಎಫ್‌ಐಆರ್‌ ದಾಖಲಿಸಲಾಗಿತ್ತು.

error: Content is protected !!