ಮಾಸ್ಕೋ: ರಷ್ಯಾದ ಕಮ್ಚಟ್ಕಾ ಪ್ರದೇಶದ ಪೂರ್ವ ಕರಾವಳಿಯಲ್ಲಿ ಶನಿವಾರ ಬೆಳಗಿನ ಜಾವ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದ ಕೇಂದ್ರಬಿಂದು ಸಮುದ್ರದಡಿಯಲ್ಲಿ ಸುಮಾರು 10 ಕಿಮೀ ಆಳದಲ್ಲಿತ್ತು.
ಇದೇ ಪ್ರದೇಶದಲ್ಲಿ ಒಂದು ತಿಂಗಳ ಹಿಂದೆ 8.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ಸುನಾಮಿ ಆತಂಕವನ್ನು ಪರಿಶೀಲಿಸಲಾಗುತ್ತಿದೆ. ಸದ್ಯಕ್ಕೆ ಭೂಕಂಪದಿಂದ ಸಾವು-ನೋವು ಬಗ್ಗೆ ವರದಿಗಳಿಲ್ಲ. ಅಧಿಕಾರಿಗಳು ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರೆಸಿದ್ದಾರೆ.