ಲಾರಿ ಪಲ್ಟಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ದಿಮ್ಮಿಗಳು ಚದುರಿ ಸಂಚಾರ ಅಸ್ತವ್ಯಸ್ತ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಇಂದು(ಸೆ.13) ಮಧ್ಯಾಹ್ನ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಘಟನೆ ನಡೆದಿದೆ.

ಮಂಗಳೂರು ನಿಂದ ತಲಪಾಡಿಯತ್ತ ಹೊರಟಿದ್ದ ಲಾರಿ ಇಳಿಜಾರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು, ಲಾರಿಯಲ್ಲಿ ಜೋಡಿಸಿದ್ದ ಮರದ ದಿಮ್ಮಿಗಳು ರಸ್ತೆ ಮೇಲೆ ಚದುರಿಹೋಗಿ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರ ಸ್ಥಗಿತವಾಗಿತ್ತು.

ಅಪಘಾತದಲ್ಲಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ನಗರ ದಕ್ಷಿಣ ಸಂಚಾರ ಪೊಲೀಸು ತಂಡ ಭೇಟಿ ನೀಡಿ ತಾತ್ಕಾಲಿಕ ಸಂಚಾರ ವ್ಯವಸ್ಥೆ ಮತ್ತು ದಿಮ್ಮಿ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದೆ.

error: Content is protected !!