ದಕ್ಷಿಣ ಕನ್ನಡದಲ್ಲಿ  ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಅಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ದಕ್ಷಿಣ ಕನ್ನಡದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.

ಹುದ್ದೆಯ ಅಧಿಸೂಚನೆ:
ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ (WCD Dakshina Kannada)
ಹುದ್ದೆಗಳ ಸಂಖ್ಯೆ: 277
ಉದ್ಯೋಗ ಸ್ಥಳ: ದಕ್ಷಿಣ ಕನ್ನಡ
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ
ಅರ್ಹತಾ ವಿವರಗಳು:
ಪೋಸ್ಟ್ ಹೆಸರು ಪೋಸ್ಟ್‌ಗಳ ಸಂಖ್ಯೆ ಅರ್ಹತೆ
ಅಂಗನವಾಡಿ ಕಾರ್ಯಕರ್ತೆ – 56 ಎಸ್.ಎಸ್.ಎಲ್.ಸಿ., ಪಿ.ಯು.ಸಿ.
ಅಂಗನವಾಡಿ ಸಹಾಯಕಿ – 221 ಎಸ್.ಎಸ್.ಎಲ್.ಸಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ಇದಲ್ಲದೇ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ.

error: Content is protected !!