ಕುಂದಾಪುರ: ಕಮಲಶಿಲೆ ಸಿದ್ದಾಪುರ ಮುಖ್ಯ ರಸ್ತೆಯ ತಾರೆಕೊಡ್ಲು ಬಳಿ ಕಮಲಶಿಲೆಯಿಂದ ನೆಲ್ಲಿಕಟ್ಟೆಯ ಕಡೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಕಡವೆ ಹಾರಿದ ಪರಿಣಾಮ ಬೈಕ್ ಅಡಬಿದ್ದು ಸವಾರ ಸ್ಥಳದಲ್ಲೇ ಸಾವನಪ್ಪಿ ಇನ್ನೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ನೆಲ್ಲಿಕಟ್ಟೆ ನಿವಾಸಿ ಶ್ರೇಯಸ್ ಮೊಗವೀರ(22) ಮೃತ ಯುವಕ.ವಿಪ್ಪೇಶ್(19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಬೈಕ್ ನಲ್ಲಿ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವಾಗ ತಾರೆಕೊಡ್ಲು ಬಳಿ ಕಡೆವೆ ಬೈಕ್ ಮೇಲೆ ಹಾರಿದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ನಜ್ಜು ನುಜ್ಜಾಗಿದ್ದು ಕಡವೆ ಕೂಡ ಸ್ಥಳದಲ್ಲೇ ಮೃತಪಟ್ಟಿದೆ. ನೆಲ್ಲಿಕಟ್ಟೆ ಸುರೇಶ ಮೊಗವೀರ ಹಾಗೂ ಯಶೋದಾ ಮೊಗವೀರ ದಂಪತಿಯ ಇಬ್ಬರು ಮಕ್ಕಳಲ್ಲಿ ಶ್ರೇಯಸ್ ಕಿರಿಯ ಪುತ್ರನಾಗಿದ್ದಾರೆ. ಪುತ್ರಿಗೆ ಮದುವೆಯಾಗಿದೆ. ಶ್ರೇಯಸ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.