ಮಂಗಳೂರು: ಕೆಂಪು ಕಲ್ಲು ಗಣಿಗಾರಿಕೆ ಮತ್ತು ಮರಳು ಸಮಸ್ಯೆಯನ್ನು ಬಗೆಹರಿಸಲು ಮುಂದಾಗದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಹಾಗೂ ಕಾರ್ಮಿಕ ವಿರೋಧಿ ನಡೆಯನ್ನು ಖಂಡಿಸಿ ನಾಳೆ(ಸೆ.16) ಬಿಜೆಪಿ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ.
ನಾಳೆ ಬೆಳಿಗ್ಗೆ 9.00ರಿಂದ ಸಂಜೆ 5.00 ಗಂಟೆಯವರೆಗೆ ಮಂಗಳೂರಿನ ಮಿನಿಸೌಧದ ಮುಂದೆ ಬೃಹತ್ ಪ್ರತಿಭಟನಾ ಧರಣಿ ನಡೆಯಲಿದೆ.
ಕಾಂಗ್ರೆಸ್ ಸರ್ಕಾರದ ಜನವಿರೋಧಿ ಮತ್ತು ಕಾರ್ಮಿಕ ವಿರೋಧಿ ನಡೆಯನ್ನು ಖಂಡಿಸಿ ಪ್ರತಿಭಟಿಸೋಣ ಎಲ್ಲರೂ ಭಾಗವಹಿಸುವಂತೆ ಮಂಗಳೂರಿನ ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಡಾ. ವೈ. ಭರತ್ ಶೆಟ್ಟಿ ಕರೆ ನೀಡಿದ್ದಾರೆ.