ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆ !!

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ(ಸೆ.15) ಸಾಧಾರಣ ಮಳೆಯಾಗಿದೆ. ಮಂಗಳೂರು, ಉಳ್ಳಾಲ, ಮೂಲ್ಕಿ, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದ ನಡುವೆ ಮಳೆ ದಾಖಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸೆಪ್ಟೆಂಬರ್ 17ರಂದು ಭಾರೀ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 28.9°C ಮತ್ತು ಕನಿಷ್ಠ 22.5°C ದಾಖಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ, ಮಣಿಪಾಲ ಸೇರಿದಂತೆ ಹಲವೆಡೆ ಸಂಜೆ ಮಳೆಯಾಗಿದೆ.

error: Content is protected !!