ಬಂಗ್ಲೆಗುಡ್ಡೆ ಕಾಡಿನಲ್ಲಿ ಮೂಳೆಗಳ ಅವಶೇಷ, ಬಟ್ಟೆಯ ತುಂಡು ಪತ್ತೆ!?

ಧರ್ಮಸ್ಥಳ: ಬಂಗ್ಲೆಗುಡ್ಡೆ ಕಾಡಿನಲ್ಲಿ ಅಸ್ಥಿ ಪಂಜರ, ಬುರುಡೆಗಾಗಿ ಎಸ್‌ಐಟಿ ಶೋಧ ಕಾರ್ಯ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಮೂಳೆಗಳ ಅವಶೇಷ, ಬಟ್ಟೆಯ ತುಂಡುಗಳು ಪತ್ತೆಯಾಗಿರುವ ಮಾಹಿತಿ ಲಭಿಸಿದೆ.

ಮೂಳೆ ಪತ್ತೆಯಾದ ಭಾಗದ ಮಣ್ಣಿನ ಸ್ಯಾಂಪಲನ್ನು ಸೋಕೋ ತಂಡ ಪಡೆದಿದ್ದು, ಆ ಜಾಗವನ್ನು ಎಸ್ಐಟಿ ಮಹಜರು ಮಾಡುತ್ತಿದೆ. ಸ್ಥಳದಲ್ಲಿ ಅರಣ್ಯ ಇಲಾಖೆ, SOCO ಟೀಮ್, ಕಂದಾಯ, ಫಾರೆನ್ಸಿಕ್ ಸೇರಿದಂತೆ ಅಧಿಕಾರಿಗಳ ತಂಡ ಬೀಡು ಬಿಟ್ಟಿದೆ.

ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಶೋಧ ಕಾರ್ಯ ಕೈಗೊಂಡಿದೆ.

error: Content is protected !!