ಕೊಣಾಜೆಕಲ್ಲು ಟ್ರೆಕ್ಕಿಂಗ್ ವೇಳೆ ಹೃದಯಾಘಾತಕ್ಕೀಡಾಗಿ ಯುವಕ ಮೃತ್ಯು!

ಮೂಡಬಿದ್ರೆ: ಇಲ್ಲಿಗೆ ಸಮೀಪದ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್ ಹೋಗಿದ್ದಾಗ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ ಒಳಪಟ್ಟು ಮೃತಪಟ್ಟ ಘಟನೆ ಇಂದು(ಸೆ.17) ಬೆಳಗ್ಗೆ ಸಂಭವಿಸಿದೆ.


ಮೃತನನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪುತ್ರ ಮನೋಜ್ ಎನ್.(22) ಎಂದು ಗುರುತಿಸಲಾಗಿದೆ. ಮಂಗಳೂರಿನ ಕಾಲೇಜೊಂದರ ಸಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕೇರಳ ಅಡೂರು ನಿವಾಸಿ ಕಾರ್ತಿಕ್(22) ಹಾಗೂ ಮನೋಜ್ ಕೊಣಾಜೆಕಲ್ಲು ಟ್ರೆಕ್ಕಿಂಗ್ ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ.

ಗುಡ್ಡ ಹತ್ತುವಾಗ ಮನೋಜ್ ಹೃದಯಾಘಾತಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!