ಬೆಳ್ತಂಗಡಿ: ಉಜಿರೆ ಗ್ರಾಮದಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಯನ್ನು ಇತ್ತೀಚೆಗೆ ಶೋಧನೆ ನಡೆಸುವ ವೇಳೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕಂಡುಬಂದಿರುವ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 26ರಂದು ಎಸ್ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ಮನೆಯಲ್ಲಿ ಶೋಧ ನಡೆಸಿದ್ದ ವೇಳೆ ತಲವಾರು ಮತ್ತು ಬಂದೂಕು ಪತ್ತೆಯಾಗಿದ್ದು, ಅದನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು
ಈ ಬಗ್ಗೆ ಎಸ್ಐಟಿ ಎಸ್ಪಿ ಸೈಮನ್ ದೂರಿನಂತೆ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕಲಂ 25(1), 1-ಎ, ಮತ್ತು 25 (1) ಬಿ ಆರ್ಮ್ಸ್ ಆಕ್ಟ್ ಅಡಿ ಕೇಸು ದಾಖಲಾಗಿದೆ.