ಧರ್ಮಸ್ಥಳ ಪ್ರಕರಣ : ಇಂದು ಚಿನ್ನಯ್ಯ ಬೆಳ್ತಂಗಡಿ ಕೋರ್ಟ್‍ಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿದ್ದು, ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ.

ಈ ನಡುವೆ ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಗೆ ಹೊಸ ತಿರುವು ಲಭಿಸಿದ್ದು, ಸೌಜನ್ಯ ಮಾವ ವಿಠಲಗೌಡನ ಬಂಗ್ಲೆಗುಡ್ಡದಲ್ಲಿ ರಾಶಿ ರಾಶಿ ಮಾನವ ಅವಶೇಷಗಳು ಸಿಗುವ ಸಾಧ್ಯತೆ ಇದೆ ಎಂಬ ವೀಡಿಯೋ ಹೇಳಿಕೆಯ ಆಧಾರದ ಮೇಲೆ ಎಸ್ಐಟಿ ತನಿಖೆ ನಡೆಸಿದೆ.

ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮನ ನೇತೃತ್ವಲ್ಲಿ ನೇತ್ರಾವತಿ ನದಿ ದಡದಲ್ಲಿರುವ ಬಂಗ್ಲೆಗುಡ್ಡ ಪ್ರದೇಶದಲ್ಲಿ ಸುಮಾರು 7 ಗಂಟೆಗಳ ಕಾಲ ಮಹಜರು ನಡೆಸಲಾಯಿತು. ಈ ಕಾರ್ಯದಲ್ಲಿ ಅರಣ್ಯ, ಲೋಕೋಪಯೋಗಿ, ಕಂದಾಯ ಇಲಾಖೆ ಮತ್ತು ಪಂಚಾಯತ್ ಸಿಬ್ಬಂದಿ ಭಾಗವಹಿಸಿದ್ದರು.

ಬಂಗ್ಲೆಗುಡ್ಡದಲ್ಲಿ ಐದು ವಿವಿಧ ಸ್ಥಳಗಳಲ್ಲಿ ನಡೆಸಿದ ಉತ್ಖನನದಲ್ಲಿ 5 ಮಾನವ ತಲೆಬುರುಡೆಗಳು ಮತ್ತು 113 ಮೂಳೆಗಳು ಕಂಡುಬಂದಿದ್ದು, ಇವು ಮಾನವ ಅವಶೇಷಗಳಾಗಿರಬಹುದು ಎಂದು ವರದಿಯಾಗಿದೆ. ಈ ಅವಶೇಷಗಳನ್ನು ಮುಂದಿನ ತನಿಖೆಗಾಗಿ ಸಂರಕ್ಷಿಸಲಾಗಿದೆ.

error: Content is protected !!