ಮಣಿಪಾಲ: ಮಣಿಪಾಲದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು ಓರ್ವ ವಿದ್ಯಾರ್ಥಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಸೆ.18ರಂದು ಮಣಿಪಾಲದ ಕಾಲೇಜೊಂದರ ಆವರಣದ ಬಳಿ ಈ ಘಟನೆ ನಡೆದಿದ್ದು, ಕಾಲೇಜಿನ ವಿದ್ಯಾರ್ಥಿಗಳಾದ ರಾಜ್ ಗಿರೀಶ ಮತ್ತು ಆತನ ಸ್ನೇಹಿತ ಸ್ವಾತಿಕ್ ಕೆ.ಅವರು ಮಧ್ಯಾಹ್ನ ಊಟಕ್ಕಾಗಿ ಕಾಲೇಜಿನಿಂದ ಹೊರಗೆ ಹೋಗುತ್ತಿದ್ದರು. ಈ ವೇಳೆ ವಿದ್ಯಾರ್ಥಿಗಳಾದ ರಾಜ್‌ವೀರ್ ಸಿಂಗ್, ವಿಕ್ರಮ್ ವೀರ್ ಸಿಂಗ್ ಮತ್ತು ಎರಡನೇ ವರ್ಷದ ವಿದ್ಯಾರ್ಥಿ ಕ್ರಿಶ್ ಅವರು ಅವರನ್ನು ಅಡ್ಡಗಟ್ಟಿದ್ದಾರೆ.