ಉಡುಪಿ: ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಗಂಜಿಮಠ ನಿವಾಸಿ ನಜೀರ್ (45) ಬಂಧಿತ ಆರೋಪಿ.
ವೆಬ್‌ಸೈಟ್ ಲಿಂಕ್ ಮತ್ತು ಆ್ಯಪ್ ಬಳಸಿ ಆನ್ಲೈನ್ ಬೆಟ್ಟಿಂಗ್ ಆಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 30,000 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.