ASIA CUP 2025: ಅಬುಧಾಬಿಯಲ್ಲಿ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಟಿ20 ಪಂದ್ಯದಲ್ಲಿ ಭಾರತ ಒಮಾನ್‌ವನ್ನು 21 ರನ್‌ಗಳಿಂದ ಸೋಲಿಸಿ ರೋಚಕ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 188 ರನ್‌ಗಳನ್ನು ಗಳಿಸಿತು. ಪ್ರತ್ಯುತ್ತರವಾಗಿ ಒಮಾನ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು 167 ರನ್‌ಗಳನ್ನು ಪಡೆದುಕೊಳ್ಳುವ ಮೂಲಕ ಪಂದ್ಯ ಮುಗಿಸಿತ್ತು.
ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಉತ್ತಮ ಆರಂಭ ನೀಡಿದರು. ಅವರು 15 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಸಿಡಿಸಿ 38 ರನ್ ಗಳಿಸಿದರು. ಸಂಜು ಸ್ಯಾಮ್ಸನ್ ಅವರು 45 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್ ಸಹಿತ 56 ರನ್ ಗಳಿಸಿ ಮಹತ್ವದ ಇನ್ನಿಂಗ್ಸ್ ಆಡಿದ್ದಾರೆ. ಬ್ಯಾಟಿಂಗ್ ಕ್ರಮಾಂಕದಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಂಡು ಎಲ್ಲ ಆಟಗಾರರಿಗೂ ಅವಕಾಶ ನೀಡಲಾಯಿತು. ಗಿಲ್ ಮತ್ತು ಅಭಿಷೇಕ್ ಎಂದಿನಂತೆ ಆರಂಭಿಕರಾಗಿ ಆಡಿದರೆ, ಸಂಜು ಮೂರನೇ ಕ್ರಮಾಂಕ, ಹಾರ್ದಿಕ್ ನಾಲ್ಕನೇ, ಅಕ್ಷರ್ ಐದನೇ ಮತ್ತು ತಿಲಕ್ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರು. ಈ ಗೆಲುವಿನೊಂದಿಗೆ ಭಾರತ ತಂಡ ಟೂರ್ನಮೆಂಟ್‌ನಲ್ಲಿ ಉತ್ತಮ ಸ್ಥಾನ ಪಡೆಯುವಲ್ಲಿ ಸಫಲವಾಗಿದೆ.