ಮಂಗಳೂರು: ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯನ್ ಆರ್ ಕೋಟ್ಯಾನ್ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.
ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕರ ಈಜು ಸ್ಪರ್ಧೆಯಲ್ಲಿ ಆರ್ಯನ್ ಆರ್ ಕೋಟ್ಯಾನ್ 1500 ಮೀ ಫ್ರೀಸ್ಟೈಲ್ ಹಾಗೂ 400 ಮೀ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ರಾಜ್ಯಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕ್ರೈಸ್ಟ್‌ಕಿಂಗ್ ಕಿಂಗ್ ಸಂಸ್ಥೆಯ ಪ್ರಥಮ ವಿಜ್ಞಾನ ವಿಭಾಗದ ಸ್ಟೆಲಿಯೋಸ್ ಡಾರ್ವಿನ್ ತಾವ್ರೊ 1500 ಮೀ ಮತ್ತು 400 ಮೀ ಫ್ರೀಸ್ಟೈಲ್‌ನಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಪ್ರಥಮ ವಿಜ್ಞಾನ ವಿಭಾಗದ ಗಗನ್ ಭಟ್ 200 ಮೀ ಫ್ರೀಸ್ಟೈಲ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಆರ್ಯನ್, ಗಗನ್ ಭಟ್, ಸಾರ್ಥಕ್ ಮತ್ತು ಸ್ಟೆಲಿಯೋಸ್ ಡಾರ್ವಿನ್ ತಾವ್ರೊ 400×100 ಮೀ ರಿಲೇನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.