ಮಂಗಳೂರು: ಮಂಗಳೂರು-ಬೆಂಗಳೂರು ರಾ.ಹೆದ್ದಾರಿಯ ನೆಲ್ಯಾಡಿ ಸಮೀಪ ಲಾವತ್ತಡ್ಕ ಎಂಬಲ್ಲಿ ಲಾರಿಯೊಂದು ಹೊಂಡಕ್ಕೆ ಸಿಲುಕಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ರಸ್ತೆಯಲ್ಲಿನ ಗುಂಡಿಗಳು ಮತ್ತು ಹೊಂಡಗಳು ವಾಹನಗಳಿಗೆ ಅಪಾಯಕಾರಿ ಪರಿಸ್ಥಿತಿಯನ್ನು ಉಂಟುಮಾಡುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ .