ಗೋಮಾಂಸ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಬೆಂಕಿ ಹಚ್ಚಿದ ಸಾರ್ವಜನಿಕರು

ಬೆಳಗಾವಿ: ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹಚ್ಚಿದ ಘಟನೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ(ಸೆ.22) ರಾತ್ರಿ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಗವಾಡ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಅಕ್ರಮವಾಗಿ ಗೋಮಾಸವನ್ನು ಸಾಗಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಪ್ರಾಣಿ ಹಿಂಸೆ ತಡೆ ಕಾಯ್ದೆ ಅಡಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಸ್ ಪಿ ಭೀಮಶಂಕರ ಗುಳೇದ ತಿಳಿಸಿದ್ದಾರೆ.

ಐನಾಪುರ ಗ್ರಾಮದಲ್ಲಿ ಲಾರಿಗೆ ಬೆಂಕಿ ಹಚ್ಚಿದ್ದು, ದರೋಡೆ ಹಾಗೂ ಅಟ್ರಾಸಿಟಿ ಪ್ರಕರಣದಲ್ಲಿ ಐವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ಕೈಗೊಂಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕಾಗವಾಡ ತಾಲೂಕಿನ ಕುಡಚಿ ಪಟ್ಟಣದಿಂದ ಆಂಧ್ರಪ್ರದೇಶದ ಹೈದರಾಬಾದ್ ಗೆ ಲಾರಿಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದಾಗ ಸಾರ್ವಜನಿಕರು ತಡೆದು ಲಾರಿಗೆ ಬೆಂಕಿ ಹಚ್ಚಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಬಂದು ಬೆಂಕಿ ನಂದಿಸಿದ್ದರು. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!