ಮಂಗಳೂರು: ಪುತ್ತೂರು ಸಹಾಯಕ ಆಯುಕ್ತರು (ಎಸಿ) ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಮುಖಂಡ, ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷದ ಅವಧಿಗೆ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡುವ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಅಧಿಕೃತವಾಗಿ ತಿಳಿಸಲಾಗಿದೆ.
ಆದೇಶದ ಪ್ರಕಾರ, ಪೊಲೀಸರು ಅಥವಾ ನ್ಯಾಯಾಲಯದಿಂದ ನೋಟಿಸ್ ಬಂದ ಸಂದರ್ಭಗಳಲ್ಲಿ ಮಾತ್ರ ಅವರಿಗೆ ಜಿಲ್ಲೆಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ.
ವಿಚಾರಣೆ ವೇಳೆ ಪೊಲೀಸರ ಪರವಾಗಿ ಡಿಎಸ್ಪಿ ಬಂಟ್ವಾಳ ಹಾಜರಾಗಿದ್ದು, ತಿಮರೋಡಿ ಪರವಾಗಿ ವಕೀಲರು ವಾದ ಮಂಡಿಸಿದರು. ಆದೇಶದ ವಿರುದ್ಧವಾಗಿ ಸರ್ಕಾರ ಅಥವಾ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಲಾಗಿದೆ.