ಮಂಗಳೂರು: ತುಳುನಾಡಿನ ಸಾಹಿತ್ಯ ಸಂಸ್ಕೃತಿ ಗಳನ್ನು ವಿದ್ಯಾರ್ಥಿ ಸಮುದಾಯಕ್ಕೆ ತಲುಪಿಸುವ ಮಹತ್ವದ ಹೊಣೆಗಾರಿಕೆ ಹಿರಿಯ ತಲೆಮಾರಿನ್ನಾದ್ದಾಗಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಈ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ರೂಪಿಸಿ ಯಶ್ವಸಿಯಾಗಿ ಅನುಷ್ಠಾನ ಗೊಳಿಸುತ್ತಿದೆ. ತುಳು ಭಾಷೆಯನ್ನು ರಾಜ್ಯದ ದ್ವಿತೀಯ ಅಧಿಕೃತ ಭಾಷೆ ಯನ್ನಾಗಿಸುವ ಪ್ರಕ್ರಿಯೆ ನಡೆಯುತ್ತಿದ್ದು ಶೀಘ್ರ ವೇ ಅನುಷ್ಠಾನಗೊಳ್ಳುವ ಸಾಧ್ಯತೆ ಗಳಿವೆ. ಯುವ ತಲೆಮಾರು ಇಂದು ತುಳು ಸಾಹಿತ್ಯ, ಇತಿಹಾಸ ಮತ್ತು ಜಾನಪದ ದ ಕುರಿತು ಆಕರ್ಷಿತ ರಾಗುತ್ತಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ನುಡಿದರು.
ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಸಿಂಗಾರ ಸುರತ್ಕಲ್ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಚೇಳೈರು ಸಹಭಾಗಿತ್ವದಲ್ಲಿ ನಡೆಯುವ ನಲ್ಮೆ ಬಲ್ಮೆ. ವಿದ್ಯಾರ್ಥಿಗಳಿಗೆ ಮೂರು ದಿನಗಳ ರಂಗ ಕಾರ್ಯಾಗಾರ ದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಹಿರಿಯ ಚಲನಚಿತ್ರ ಹಾಗೂ ರಂಗ ಕಲಾವಿದೆ ಗೀತಾ ಸುರತ್ಕಲ್ ಅವರು ರಂಗಭೂಮಿ ಆತ್ಮ ವಿಶ್ವಾಸ ಮತ್ತು ಮಾನವೀಯ ಮೌಲ್ಯ ತಿಳಿಸಿ ಕೊಡುತ್ತದೆ. ಸಿಂಗಾರ ಸುರತ್ಕಲ್ ಸಂಸ್ಥೆಯು ತುಳು ರಂಗಭೂಮಿಗೆ ವಿಶೇಷ ಕೊಡುಗೆ ನೀಡಿದೆ ಎಂದರು.
ಚೇಳೈರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ ಮಾತನಾಡಿ ಗ್ರಾಮೀಣ ಪ್ರದೇಶದ ಅವಕಾಶ ವಂಚಿತ ವಿದ್ಯಾರ್ಥಿಗಳಿಗೆ ರಂಗ ತರಬೇತಿಯ ಅವಶ್ಯಕತೆ ಇದ್ದು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಕೊಳ್ಳ ಬೇಕು ಎಂದರು. ಹಿರಿಯ ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಮಾತನಾಡಿ ತುಳುನಾಡಿ ನ ಇತಿ ಹಾಸ ಸಾಹಿತ್ಯ ದ ಓದಿನ ಮೂಲಕ ವಿದ್ಯಾರ್ಥಿಗಳು ಪ್ರಬುದ್ಧರಾಗ ಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಯ ಉಪಾಧ್ಯಕ್ಷ ವೆಂಕಟೇಶ್ ಶೆಟ್ಟಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕ್ಕೆ ಪೂರಕ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪುಷ್ಪರಾಜ್ ಶೆಟ್ಟಿ ಮಧ್ಯ ಮಾತ ನಾಡಿ ನಲ್ಮೆ ಬಲ್ಮೆ ಪರಿಕಲ್ಪನೆ ಯ ಮೂಲಕ ವಿದ್ಯಾರ್ಥಿಗಳಿಗೆ ಸಾಹಿತ್ಯ ಅಭಿ ರುಚಿ ಯೊಂದಿಗೆ ಸಮಗ್ರ ಬೆಳವಣಿಗೆ ಗೆ ಅವಕಾಶ ಲಭ್ಯ ವಾಗುತ್ತದೆ ಎಂದರು.
ಸಿಂಗಾರ ಸುರತ್ಕಲ್ ನ ಕಾರ್ಯದರ್ಶಿ ಕೃಷ್ಣ ಮೂರ್ತಿ. ಪಿ. ಮಾತನಾಡಿ ಸಮಗ್ರ ವಿಕಸನಕ್ಕೆ ರಂಗಭೂಮಿ ಪ್ರೇರಕ ಶಕ್ತಿ ಯಾಗಿದ್ದು ನಲ್ಮೆಬಲ್ಮೆ ಕಾರ್ಯಕ್ರಮ ದ ಮೂಲಕ ರಂಗಾಸಕ್ತರು ಮೂಡಿ ಬರುತ್ತಾರೆಂಬ ಆಶಯ ವ್ಯಕ ಪಡೆಸಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಜ್ಯೋತಿ ಚೇಳೈರು ಸ್ವಾಗತಿಸಿದರು. ಉಪನ್ಯಾಸಕಿ ಜಯಶ್ರೀ ಜಿ. ವಂದಿಸಿದರು.
ಹಿರಿಯ ರಂಗ ನಿರ್ದೇಶಕ ಜಗನ್ ಪವಾರ್ ಬೇಕಲ್ ಕನ್ನಡ ಸಾಹಿತ್ಯ ಪರಿಷತ್ ಸುರತ್ಕಲ್ ಹೋಬಳಿ ಘಟಕದ ಅಧ್ಯಕ್ಷೆ ಗುಣವತಿ ರಮೇಶ್, ಉಪನ್ಯಾಸಕಿ ಯರಾದ ಶೋಭಾ ಶರ್ಮಾ, ಜಯಶ್ರೀ, ತ್ರಿವೇಣಿ, ವಿದ್ಯಾರ್ಥಿ ಸಾಂಸ್ಕೃತಿಕ ಕಾರ್ಯದರ್ಶಿ ರಕ್ಷಿತ್, ವಿದ್ಯಾರ್ಥಿ ನಾಯಕ ರಾದ ಚಂದನ್ ಮತ್ತು ಅಕ್ಷತಾ ಉಪಸ್ಥಿತರಿದ್ದರು.
ಉಪನ್ಯಾಸಕ ಚಂದ್ರನಾಥ್. ಎಂ. ಕಾರ್ಯಕ್ರಮವನ್ನು ನಿರೂಪಿಸಿದರು.