ದುಬೈ : ಏಷ್ಯಾ ಕಪ್ 2025ರ ಟೂರ್ನಿಯಲ್ಲಿ ಭಾರತ ತಂಡ ತನ್ನ ಗೆಲುವಿನ ಲಯವನ್ನು ಮುಂದುವರಿಸಿದೆ. ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭಾರತವು 41 ರನ್‌ಗಳ ಜಯ ಸಾಧಿಸಿತು.
ಅಭಿಷೇಕ್ ಶರ್ಮಾ ಅರ್ಧಶತಕ ಹಾಗೂ ಕುಲ್ದೀಪ್ ಯಾದವ್ ಸ್ಪಿನ್ ಬೌಲಿಂಗ್ ನಿಂದಾಗಿ ಟೀಮ್ ಇಂಡಿಯಾ ಸೂಪರ್-4ರ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 41 ರನ್‌ಗಳ ಗೆಲುವು ಪಡೆದಿದೆ. ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಭಾರತ ತಂಡ, 20 ಓವರ್‌ಗಳ ಏಷ್ಯಾ ಕಪ್ ಟೂರ್ನಿಯ ಫೈನಲ್‌ಗೆ ಪ್ರವೇಶ ಮಾಡಿದೆ. ಭಾರತದ ಈ ಗೆಲುವಿನ ಮೂಲಕ ಶ್ರೀಲಂಕಾ ತಂಡ ಫೈನಲ್ ರೇಸ್‌ನಿಂದ ಅಧಿಕೃತವಾಗಿ ಹೊರಬಿದ್ದಿದೆ.
ಭಾರತ ಬಾಂಗ್ಲಾದೇಶ ತಂಡಕ್ಕೆ ನೀಡಿದ್ದ 169 ರನ್‌ಗಳ ಗುರಿಯನ್ನು ನೀಡಿದ್ದು, ಕುಲ್ದೀಪ್ ಯಾದವ್ (18ಕ್ಕೆ 3) ಹಾಗೂ ಜಸ್‌ಪ್ರೀತ್ ಬುಮ್ರಾ (18ಕ್ಕೆ 2) ಅವರ ಶಿಸ್ತುಬದ್ದ ಬೌಲಿಂಗ್ ದಾಳಿಗೆ ನಲುಗಿದ ಬಾಂಗ್ಲಾದೇಶ ತಂಡ 19.3 ಓವರ್‌ಗಳಿಗೆ 127 ರನ್‌ಗಳಿಗೆ ಆಲ್‌ಔಟ್ ಆಗಿದೆ.