ಚಿಕ್ಕಮಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ವಿರುದ್ಧ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
2022 ರ ಡಿಸೆಂಬರ್ ನಲ್ಲಿ ಬಿಜೆಪಿ ಮುಖಂಡ ದಿನೇಶ್ ಅವರು ಲೋಕಾಯುಕ್ತ ಮತ್ತು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಖಾಸಗಿ ದೂರು ದಾಖಲಿಸಿದ್ದರು. ತನಿಖೆ ನಡೆಸಲು ಲೋಕಾಯುಕ್ತ ಎಸ್ಪಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ನವೆಂಬರ್ 17ರೊಳಗೆ ತನಿಖಾ ವರದಿ ಸಲ್ಲಿಸಲು ಕೋರ್ಟ್ ಸೂಚನೆ ನೀಡಿತ್ತು. ಇದೀಗ ಅದರಂತೆ ಶಾಸಕ ಟಿ.ಡಿ ರಾಜೇಗೌಡ, ಪತ್ನಿ ಪುಷ್ಪಾ, ಮಗ ರಾಜ್ ದೇವ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸೆಕ್ಷನ್ 7, 8, 13, 120(B)420,193, 200 ಅಡಿ ಎಫ್ ಐಆರ್ ದಾಖಲು ಮಾಡಲಾಗಿದೆ.