ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಕಾಪಿಕಾಡು ಗುಡ್ಡೆ ಮನೆ ನಿವಾಸಿ ಟೀನಾ (23) ಎಂಬ ಯುವತಿ ನಾಪತ್ತೆಯಾಗಿದ್ದಾರೆ. ಇವರು ಸೆಪ್ಟೆಂಬರ್ 23ರಂದು ಮಧ್ಯಾಹ್ನ 1 ರಿಂದ 3 ಗಂಟೆಯ ಅವಧಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನಾಪತ್ತೆಯಾಗಿರುವುದಾಗಿ ತಾಯಿ ನೀಡಿದ ದೂರಿನಂತೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೀನಾ 5.1 ಅಡಿ ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು, ಕೊಂಕಣಿ, ಇಂಗ್ಲಿಷ್, ಹಿಂದಿ, ಕನ್ನಡ ಮತ್ತು ತುಳು ಭಾಷೆ ಮಾತನಾಡಲು ಗೊತ್ತಿದೆ. ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾಭ್ಯಾಸ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಯುವತಿಯ ಬಗ್ಗೆ ಮಾಹಿತಿ ಇರುವವರು ತಕ್ಷಣ ಬಜ್ಪೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಪೊಲೀಸರು ಕೋರಿದ್ದಾರೆ.