ಉಡುಪಿ: AKMS ಬಸ್ ಮಾಲಕ ಕೊಲೆ, ಕೊಲೆಯತ್ನದಂತಹ ಹತ್ತಾರು ಪ್ರಕರಣಗಳ ಆರೋಪಿ ರೌಡಿ ಶೀಟರ್ ಸೈಫುದ್ದೀನ್ ನನ್ನು ಮಲ್ಪೆ ಸಮೀಪದ ಕೊಡವೂರಿನ ಆತನ ಮನೆಯಲ್ಲೇ ಅಪರಿಚಿತ ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಇಂದು(ಸೆ.27)ರ ಮಧ್ಯಾಹ್ನ ಬೆಳಕಿಗೆ ಬಂದಿದೆ.
ಮಣಿಪಾಲ ಅತ್ರಾಡಿ ಮೂಲದ ಸಾರಿಗೆ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದ ಸೈಫುದ್ದೀನ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಆತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲವು ದಶಕಗಳಿಂದ ಸಾರಿಗೆ ವ್ಯವಹಾರದಲ್ಲಿ ತೊಡಗಿದ್ದ ಸೈಫುದ್ದಿನ್ ಮೇಲೆ ಹತ್ತಾರು ಗಂಭೀರ ಪ್ರಕರಣಗಳು ದಾಖಲಾಗಿತ್ತು.