ಮಂಗಳೂರು: ಶ್ರೀ ಕ್ಷೇತ್ರ ಕಟೀಲಿನಲ್ಲಿ ಇತ್ತೀಚೆಗೆ ಜಾರಿಗೆ ತಂದಿರುವ ಸೇವಾ ದರ ಹೆಚ್ಚಳವನ್ನು ಮರುಪರಿಶೀಲಿಸುವಂತೆ ಭಕ್ತರು ಹಾಗೂ ಗ್ರಾಮಸ್ಥರು ಒಟ್ಟಾಗಿ ಮನವಿ ಮಾಡಿದ್ದಾರೆ.
ಅತ್ತೂರು–ಕೊಡೆತ್ತೂರು ಗ್ರಾಮಸ್ಥರು ಹಾಗೂ ಶ್ರೀ ಕ್ಷೇತ್ರದ ಅನೇಕ ಭಕ್ತರು ಸೇರಿ ದೇವಸ್ಥಾನದ ಆಡಳಿತ ಮಂಡಳಿಯ ಮುಕ್ತೇಸರರಾದ ಕೊಡೆತ್ತೂರುಗುತ್ತು ನತ್ ಕುಮಾರ್ ಶೆಟ್ಟಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿಯಲ್ಲಿ, “ಹೊಸ ಸೇವಾ ದರಗಳು ಸಾಮಾನ್ಯ ಭಕ್ತರಿಗೆ ಹೆಚ್ಚುವರಿ ಹೊರೆಯಾಗುತ್ತಿವೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕಡಿಮೆ ದರದಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಗಬೇಕು. ಆದ್ದರಿಂದ ದರಗಳನ್ನು ಮತ್ತೊಮ್ಮೆ ವಿಮರ್ಶಿಸಿ, ಭಕ್ತರಿಗೆ ಹೊರೆಯಾಗದ ರೀತಿಯಲ್ಲಿ ಪರಿಹಾರ ಕಂಡುಹಿಡಿಯಲು ಕ್ರಮ ಕೈಗೊಳ್ಳಬೇಕು” ಎಂದು ವಿನಂತಿಸಲಾಗಿದೆ.
ಈ ಕುರಿತು ದೇವಸ್ಥಾನ ಆಡಳಿತ ಮಂಡಳಿ ಈ ಬಗ್ಗೆ ಶೀಘ್ರದಲ್ಲಿಯೇ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.