ಕಾರ್ಕಳದ ಎಸ್.ವಿ.ಟಿ ವನಿತಾ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ :ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ (ಆಡಳಿತ) ಉಡುಪಿ ಜಿಲ್ಲೆ , ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ 2025 – 26 ರಲ್ಲಿ ಕಾರ್ಕಳದ ಎಸ್.ವಿ.ಟಿ ವನಿತಾ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

9ನೇ ತರಗತಿಯ ಧನ್ಯಶ್ರೀ , 10ನೇ ತರಗತಿಯ ಸೌಮ್ಯಾ ಮತ್ತು ವಾಣಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು.

ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು , ಹಿರಿಯ ಸಹ ಶಿಕ್ಷಕರು, ಬೋಧಕ ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.‌

error: Content is protected !!