ನವದೆಹಲಿ: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಬಾರಿಯ ಏಶ್ಯ ಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿ, ಚಾಂಪಿಯನ್ ಆಗಿ ಹೊರಹೊಮ್ಮಿರುವ ಭಾರತ ಕ್ರಿಕೆಟ್ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 21 ಕೋಟಿ ರೂ. ಬಹುಮಾನ ಘೋಷಿಸಿದೆ.
ಏಶ್ಯ ಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 5 ವಿಕೆಟ್ ಗಳಿಂದ ಪರಾಭವಗೊಳಿಸುವ ಮೂಲಕ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಸಿಸಿಐ, “ಇದೊಂದು ಅಸಾಧಾರಣ ಗೆಲುವಾಗಿದೆ. ಇದರ ಸಂಭ್ರಮಾಚರಣೆಯ ಭಾಗವಾಗಿ ಭಾರತ ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳಿಗೆ 21 ಕೋಟಿ ರೂ. ನಗದು ಬಹುಮಾನ ಘೋಷಿಸಲಾಗಿದೆ” ಎಂದು ಪ್ರಕಟಿಸಿದೆ.