ಶಿರಾಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಡಿಕ್ಕಿ: 16 ಮಂದಿಗೆ ಗಾಯ

ಪುತ್ತೂರು: ಬೆಂಗಳೂರು ಮತ್ತು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಶಿರಾಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಭಾನುವಾರ(ಸೆ.28) ಸಂಜೆ ನಡೆದಿದೆ.

ಶಿರಾಡಿ ಗ್ರಾಮದ ಗುಂಡ್ಯದ ಬಳಿ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾಜಹಂಸ ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಸುಮಾರು ಮೂರು ಗಂಟೆಗಳ ಕಾಲ ವಾಹನ ಸಂಚಾರವು ಅಸ್ತವ್ಯಸ್ತಗೊಂಡಿತ್ತು.

ಧರ್ಮಸ್ಥಳಕ್ಕೆ ಹೋಗುತ್ತಿದ್ದ ಬಸ್‌ನಲ್ಲಿದ್ದ ಒಂಬತ್ತು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಹಂಸ ಬಸ್‌ನಲ್ಲಿದ್ದ ಏಳು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೆಲ್ಯಾಡಿ ಹೊರಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ, ವಾಹನ ಸಂಚಾರವನ್ನು ಸುಗಮಗೊಳಿಸಿದ್ದಾರೆ.

error: Content is protected !!