ಪಡುಬಿದ್ರಿ: ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಇಂದು ಬೆಳಗಿನ ಜಾವ ದುರಂತ ಸಂಭವಿಸಿದೆ. ಅಪರಿಚಿತ ವಾಹನವೊಂದು ಪುತ್ತೂರು ನೋಂದಣಿ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಬೈಕ್ ಸವಾರನ ಗುರುತು ಇನ್ನೂ ಪತ್ತೆಯಾಗಿಲ್ಲ. ಬೈಕ್ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನೆಯ ನಂತರ ಮೃತದೇಹವನ್ನು ಸ್ಥಳೀಯರು ಶವಾಗಾರಕ್ಕೆ ಸಾಗಿಸಲು ಸಹಕರಿಸಿದರು. ಸ್ಥಳಕ್ಕೆ ಆಗಮಿಸಿದ ಪಡುಬಿದ್ರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.