ಮಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ ಸುಮಾರು 2.55 ಗಂಟೆಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು, ನೇರವಾಗಿ ಸಂಜೆ 3.45 ಗಂಟೆಗೆ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಯ ವೇಳೆಗೆ ನಗರದ ಮಂಗಳಾ ಸ್ಟೇಡಿಯಂನಲ್ಲಿ ಜರಗಿರುವ ಪಿಲಿನಲಿಕೆ ಕಾರ್ಯಕ್ರಮಕ್ಕೆ ಭೇಟಿ ನೀಡಿ
ರಾತ್ರಿ 7.15 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಉಪ ಮುಖ್ಯಮಂತ್ರಿಯವರ ಈ ಭೇಟಿಯನ್ನು ಮುನ್ನೆಚ್ಚರಿಕೆಯಿಂದ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.