ನಿಗೂಢ ಸ್ಫೋಟ : ಚಿಕಿತ್ಸೆ ಫಲಿಸದೆ ದಂಪತಿ ಮರಣ; ಮಗು ಅನಾಥ

ಹಾಸನ: ಹಳೇಆಲೂರು ಪಟ್ಟಣದಲ್ಲಿ ಸೋಮವಾರ(ಸೆ.29) ರಾತ್ರಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

hassan (1)

ಸುದರ್ಶನ್ (32) ಮತ್ತು ಪತ್ನಿ ಕಾವ್ಯ (27) ನಿಗೂಢ ಸ್ಫೋಟದಲ್ಲಿ ಮೃತಪಟ್ಟ ದಂಪತಿ.

ಘಟನೆಯು ಸೋಮವಾರ ರಾತ್ರಿ ಸುಮಾರು 8.30ಕ್ಕೆ ಸಂಭವಿಸಿದ್ದು, ದೇಶಾದ್ಯಂತ ಸುದ್ದಿ ಈ ಸುದ್ದಿ ವೈರಲ್ ಆಗಿತ್ತು. ದಂಪತಿಯನ್ನು ಗಾಯಗೊಂಡ ತಕ್ಷಣ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಯಿತು.

ದಂಪತಿ ಚಿಕಿ*ತ್ಸೆ ಫಲಕಾರಿಯಾಗದೆ ಸೋಮವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆದಿಂದಾಗಿ ಒಂದು ವರ್ಷದ ಮಗು ಅನಾಥವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯ ಮೂಲ ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

error: Content is protected !!