ಮಗನಿಗಾಗಿ 15 ವರ್ಷದಿಂದ ಪರಿತಪಿಸಿದ ತಾಯಿ ಆತ್ಮಹತ್ಯೆಗೆ ಶರಣು !!

ಬೆಳ್ತಂಗಡಿ: ಅನಾರೋಗ್ಯದ ಸಮಸ್ಯೆ ಹಾಗೂ ಮಗನ ಚಿಂತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ.

ನೆಲ್ಲಿಗುಡ್ಡೆ ನಿವಾಸಿ ಉಮಾವತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

15 ವರ್ಷಗಳ ಹಿಂದೆ ಉಮಾವತಿಯವರ ಮಗ ಮನೆ ಬಿಟ್ಟು ಹೋಗಿ ಕಾಣೆಯಾಗಿದ್ದಾರೆ. ಅದೇ ಚಿಂತೆಯಲ್ಲಿದ್ದ ಅವರು ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದರು. ಹಾಗಾಗಿ ಮಾನಸಿಕವಾಗಿ ನೊಂದುಕೊಂಡು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಇವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರ ಕುಟುಂಬಸ್ಥರು ನೀಡಿದ ದೂರಿನಂತೆ ಪೂಂಜಾಲ್ ಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!