ಬೈಂದೂರು: ತಾಲೂಕಿನ ಕಂಬದಕೋಣೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ಕಂಟೈನರ್ ಲಾರಿಯೊಂದು ಸೇತುವೆಗೆ ಢಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದೆ.
ಡಿಕ್ಕಿಯ ರಭಸಕ್ಕೆ ಲಾರಿ ನದಿಗೆ ಪಲ್ಟಿ ಹೊಡೆದು ಬೀಳುವ ಅಪಾಯ ಎದುರಾಗಿತ್ತು. ಚಾಲಕ ಹಾಗೂ ಕ್ಲೀನರ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿದ್ದ ಈ ಕಂಟೈನರ್ ಲಾರಿಯು ಸೇತುವೆಯ ಅಂಚಿನಲ್ಲಿ ನಿಂತಿರುವ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು.
ಘಟನೆಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ನಂತರ ಸಾಮಾನ್ಯ ಸ್ಥಿತಿಗೆ ಮರಳಿತು.