ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಸವಾರ ಮೃತ್ಯು

ಕುಂದಾಪುರ: ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕೋಣಿ ಎಂಬಲ್ಲಿ ಶುಕ್ರವಾರ(ಅ.3) ನಸುಕಿನ ವೇಳೆ ನಡೆದಿದೆ.

ಮೃತರನ್ನು ಕೃಷ್ಣ ಪೂಜಾರಿ(45) ಎಂದು ಗುರುತಿಸಲಾಗಿದೆ.

ಬಸ್ರೂರು ಮೂರುಕೈಯಿಂದ ಕೋಣಿ ಕಡೆಗೆ ಹೋಗುತ್ತಿದ್ದ ಬೈಕ್ ಆಯತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಕೃಷ್ಣ ಪೂಜಾರಿ ತಲೆಗೆ ವಿದ್ಯುತ್ ಕಂಬ ತಾಗಿ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಕೃಷ್ಣ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!