ಉಡುಪಿ: ನಗರಸಭೆಗೆ ಸೇರಿರುವ ಅಲೆವೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕರ್ವಾಲುವಿನ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಇಂದು ಬೆಳಗಿನ ಜಾವ ಸುಮಾರು 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು.

ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಘಟಕವನ್ನು ಆವರಿಸಿ, ಕಟ್ಟಡ, ಶೆಡ್‌ನಲ್ಲಿದ್ದ ಯಂತ್ರೋಪಕರಣಗಳು ಮತ್ತು ತ್ಯಾಜ್ಯ ಸಂಪೂರ್ಣವಾಗಿ ಸುಟ್ಟುಹೋಗಿವೆ.
ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಿಂದ ಸುಮಾರು ₹6-7 ಕೋಟಿ ನಷ್ಟ ಉಂಟಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
