ಉಡುಪಿ: AKMS ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ಉಡುಪಿ ಮಿಷನ್ ಕಾಂಪೌಂಡ್ ನಿವಾಸಿ ರಿಧಾ ಶಭನಾ(27) ಎಂದು ಹೆಸರಿಸಲಾಗಿದೆ.
ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇದೀಗ ಕೊಲೆಗೆ ಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ ಮಿಷನ್ ಕಾಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಮಂಗಳೂರು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕುರ್ (43) ಎಂಬವರು ಸೈಫುದ್ದಿನ್ ಮನೆಯಲ್ಲೇ ತಲ್ವಾರ್, ಚಾಕುವಿನಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು.