ಪೀಣ್ಯ ದಾಸರಹಳ್ಳಿ: ಬೃಹತ್ ಮರ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಉರುಳಿ ಬಿದ್ದು ಯುವತಿ ಸಾವನ್ನಪ್ಪಿದ್ದು, ಮತ್ತೊಂದು ಬೈಕ್‌ನಲ್ಲಿ ಹೋಗುತ್ತಿದ್ದ ಸವಾರ ಗಾಯಗೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ(ಅ.5) ರಾತ್ರಿ ನಡೆದಿದೆ.
ಹೆಬ್ಟಾಳದ ಕೀರ್ತನ (24) ಮೃತ ಯುವತಿ. ಮತ್ತೂಂದು ಬೈಕ್ ಚಾಲನೆ ಮಾಡುತ್ತಿದ್ದ ಭಾಸ್ಕರ್ ಎಂಬಾತನಿಗೆ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾತ್ರಿ 8 ಗಂಟೆ ಸುಮಾರಿಗೆ ಸೋಲದೇವನಹಳ್ಳಿ ರಸ್ತೆಯಲ್ಲಿ ಯುವತಿ ತೆರಳುತ್ತಿದ್ದ ಏಕಾಏಕಿ ಹಳೆಯ ಬೃಹತ್ ಮರ ಬುಡ ಸಮೇತ ಬಿದ್ದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟು, ಮತ್ತೂಂದು ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಗೂ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಸೋಲದೇವನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮೃತ ಯುವತಿಯ ಶವವನ್ನು ಸಪ್ತಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಧಿಕಾರಿಗಳಿಂದ ಮರ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.