ನವದೆಹಲಿ: ಹೋಟೆಲ್‌ನಲ್ಲಿ 18 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು 20 ವರ್ಷದ ಯುವಕನೊಬ್ಬ ಮಾದಕ ದ್ರವ್ಯ ಸೇವಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪ ಮಾಡಿದ್ದಾಳೆ.
ಆರೋಪಿ ಅಮನ್ ಪ್ರೀತ್, ಸ್ನೇಹ ಬೆಳೆಸುವ ನೆಪದಲ್ಲಿ ತನ್ನನ್ನು ಹೋಟೆಲ್‌ಗೆ ಕರೆದೊಯ್ದು, ಅಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ, ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ತೆಗೆದಿದ್ದಾನೆ. ದೃಶ್ಯಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ಆರೋಪ ಮಾಡಿದ್ದಾಳೆ.
ವಿದ್ಯಾರ್ಥಿನಿ ಮೂಲತಃ ಹರಿಯಾಣದ ಜಿಂದ್‌ನವಳಾಗಿದ್ದು, ಆದರ್ಶ ನಗರದ ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಾಳೆ. ಸೆಪ್ಟೆಂಬರ್ 9 ರಂದೇ ಈ ಘಟನೆ ನಡೆದಿದ್ದು ವಿದ್ಯಾರ್ಥಿನಿ ದೂರು ದಾಖಲಿಸಿದ ನಂತರವೇ ಬೆಳಕಿಗೆ ಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.