ಮಂಜೇಶ್ವರ: ದಂಪತಿ ಆತ್ಮಹತ್ಯೆಗೆ ಶರಣು

ಮಂಜೇಶ್ವರ: ಪೊಲೀಸ್ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಕಡಂಬಾರಿನ ಅಜಿತ್(35) ಮತ್ತು ಪತ್ನಿ ಶ್ವೇತಾ(27) ಎಂದು ಹೆಸರಿಸಲಾಗಿದೆ. ಅಜಿತ್ ಪೈಂಟಿಂಗ್ ಕಾರ್ಮಿಕರಾಗಿದ್ದು, ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್ ನ ಖಾಸಗಿ ಶಾಲಾ ಶಿಕ್ಷಕಿಯಾಗಿದ್ದರು. ನಿನ್ನೆ ಸಂಜೆ ಮನೆಯಲ್ಲಿ ಇಬ್ಬರೂ ವಿಷ ಸೇವಿಸಿದ್ದು ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಜಿತ್ ನಿನ್ನೆ ರಾತ್ರಿಯೇ ಮೃತಪಟ್ಟರೆ ಶ್ವೇತಾ ಇಂದು ಬೆಳಿಗ್ಗೆ ಕೊನೆಯುಸಿರು ಎಳೆದಿದ್ದಾರೆ.

kasaragod-couple-suicide-ajith-shwetha-1
ನಿನ್ನೆ ಅಜಿತ್ ದಂಪತಿ ತಮ್ಮ ಮೂರು ವರ್ಷದ ಮಗನೊಂದಿಗೆ ಬಂದ್ಯೋಡಿನ ಸಹೋದರಿ ಮನೆಗೆ ಬಂದಿದ್ದು ತಮಗೆ ಬೇರೆಡೆ ತೆರಳಲಿರುವ ಕಾರಣ ಮಗನನ್ನು ನೋಡಿಕೊಳ್ಳಿ ಎಂದು ಹೇಳಿ ತೆರಳಿದ್ದರು.
ಸಂಜೆ ಮನೆಯ ವರಾಂಡದಲ್ಲಿ ಬಿದ್ದಿದ್ದ ಇವರನ್ನು ಸ್ಥಳೀಯರು ಗಮನಿಸಿ ಆಸ್ಪತ್ರೆಗೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದರು.
ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವುದೇ ಕೃತ್ಯಕ್ಕೆ ಕಾರಣ ಎಂದು ಪೊಲೀಸರ ಪ್ರಾಥಮಿಕ ಮಾಹಿತಿ ತಿಳಿಸಿವೆ.

error: Content is protected !!