ನಟಿಗೆ ಲೈಂಗಿಕ, ಮಾನಸಿಕ ಕಿರುಕುಳ ಆರೋಪ: ನಿರ್ಮಾಪಕ ಹೇಮಂತ್‌ ಕುಮಾರ್‌ ಅರೆಸ್ಟ್‌

ಬೆಂಗಳೂರು: ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಿರ್ಮಾಪಕ ಹೇಮಂತ್‌ ಕುಮಾರ್‌ ಅವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.

ರಿಚ್ಚಿ ಸಿನಿಮಾದ ಶೂಟಿಂಗ್‌ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೇಮಂತ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ.

2022 ರಲ್ಲಿ ರಿಚ್ಚಿ ಹೆಸರಿನಲ್ಲಿ ಸಿನಿಮಾ ಮಾಡುತ್ತಿರುವುದಾಗಿ ಪರಿಚಯ ಮಾಡಿಕೊಂಡಿದ್ದರು. ನಂತರ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಎರಡು ಲಕ್ಷ ರೂ. ಹಣಕ್ಕೆ ಒಪ್ಪಂದವಾಗಿತ್ತು. ಮುಂಗಡ ಹಣವಾಗಿ ಹೇಮಂತ್‌ ಕುಮಾರ್‌ 60 ಸಾವಿರ ರೂ. ನೀಡಿದ್ದರು.

ಸಿನಿಮಾ ಶೂಟಿಂಗ್ ವೇಳೆ ಅರೆಬರೆ ಬಟ್ಟೆ ಧರಿಸುವಂತೆ ಒತ್ತಾಯ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಚಿತ್ರ ಶೂಟಿಂಗ್ ಮುಗಿದ ಮೇಲೆ ಪ್ರಚಾರದ ನೆಪದಲ್ಲಿ ಖಾಸಗಿ ಹೋಟೆಲಿಗೆ ಒಬ್ಬಳೇ ಬರುವಂತೆ ಕಿರುಕುಳ ನೀಡಿದ್ದರು.

ಬೇಡಿಕೆಗೆ ಒಪ್ಪದೇ ಇದ್ದಾಗ ಚಿತ್ರದಲ್ಲಿ ಸೆನ್ಸಾರ್ ಆಗದ ಪೋಟೋಗಳನ್ನು ಸೋಷಿಯಲ್ ಮೀಡಿಯದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದರು. ಅಷ್ಟೇ ಅಲ್ಲದೇ ನನ್ನ ತಾಯಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನಟಿ ದೂರು ನೀಡಿದ್ದರು.

ಕಿರುತರೆ ನಟಿಗೆ ಲೈಂಗಿಕ‌, ಮಾನಸಿಕ ಕಿರುಕುಳ ಆರೋಪ; ಬೆಂಗಳೂರಿನಲ್ಲಿ ನಟ, ನಿರ್ದೇಶಕ ಹೇಮಂತ್ ಬಂಧನ

error: Content is protected !!