ಸುರತ್ಕಲ್ : ಯಕ್ಷ ಅಭಿಮಾನಿ ಬಳಗ ಟ್ರಸ್ಟ್ ಸುರತ್ಕಲ್ ಇದರ ವತಿಯಿಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದಲ್ಲಿ ಟ್ರಸ್ಟ್ ದಶ ಸಂವತ್ಸರ ಸಂಭ್ರಮ ಕಾರ್ಯಕ್ರಮ ಅಂಗವಾಗಿ ಶುಭಂ ಕರೋತಿ ಕಲ್ಯಾಣಂ ಯಕ್ಷಗಾನ ಕಾರ್ಯಕ್ರಮ ಹಾಗೂ ಸಾಧಕರಿಗೆ ಸಮ್ಮಾನ ಸುರತ್ಕಲ್ ನ ವಿದ್ಯಾದಾಯಿನಿ ವಜ್ರಮಹೋತ್ಸವ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಹಿರಿಯ ಭಾಗವತರಾದ ಕುರಿಯ ಗಣಪತಿ ಶಾಸ್ತ್ರಿ ಹಿರಿಯ ಮದ್ದಳೆಗಾರರಾದ ಮಣಿಮುಂಡ ಸುಬ್ರಹ್ಮಣ್ಯ ಶಾಸ್ತ್ರಿ ಹಿರಿಯ ವೇಷಧಾರಿ ರಮೇಶ್ ಭಟ್ ಬಾಯಾರು, ಹಿರಿಯ ಪ್ರಸಂಗ ಕರ್ತರಾದ ಮಾಧವ ಭಂಡಾರಿ ಕುಳಾಯಿ, ನೇ ಪತ್ಯ ಕಲಾವಿದರಾದ ಮನೋಜ್ ಕುಮಾರ್‌ಕಿನ್ನಿಗೋಳಿ ಅವರನ್ನು ಸಮ್ಮಾನಿಸಲಾಯಿತು.
ಕಾರ್ಯಕ್ರಮದ ಸಂಘಟನೆಗೆ ನೆರವು ನೀಡಿದ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ಕಳೆದ ಹತ್ತು ವರ್ಷಗಳಿಂದ ಯಕ್ಷ ಅಭಿಮಾನಿ ಬಳಗವು ಟ್ರಸ್ಟ್ ಮೂಲಕ ಯಕ್ಷಗಾನ ಸೇವೆಯನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು. ವೇ.ಮೂ. ವೆಂಕಟರಮಣ ಆಸ್ರಣ್ಣ ಅವರು ಶುಭ ಹಾರೈಸಿದರು.
ವೇದಿಕೆಯಲ್ಲಿ ಉದ್ಯಮಿ ರವೀಂದ್ರ ಶೇಟ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಅಗರಿ ಎಂಟರ್ಪೈಸಸ್ ಮಾಲಕರಾದ ಅಗರಿ ರಾಘವೇಂದ್ರ ರಾವ್, ಹಿಂದೂ ವಿದ್ಯಾದಾಯಿನಿ ಸಂಘದ ಅಧ್ಯಕ್ಷರಾದ ಜಯಚಂದ್ರ ಹತ್ವಾರ್, ಯಕ್ಷಗಾನ ಅಕಾಡೆಮಿಯ ಸದಸ್ಯ ರಾಜೇಶ್ ಕುಳಾಯಿ, ನ್ಯಾಯವಾದಿ ಮಹಾಬಲ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಕಲಾವಿದೆ ಪೂರ್ಣಿಮಾ ಯತೀಶ್ ರೈ, ಟ್ರಸ್ಟ್ ಅಧ್ಯಕ್ಷರಾದ ವಿದ್ಯಾ ಶಂಕರನಾರಾಯಣ ಭಟ್, ಕಾರ್ಯದರ್ಶಿಗಳಾದ ಪೂರ್ಣಿಮಾ ಪ್ರಶಾಂತ ಶಾಸ್ತ್ರಿ ಕೋಶಾಧಿಕಾರಿ ಡಾಕ್ಟರ್ ಅನಂತಮೂರ್ತಿ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ರಸಾದ್ ಕಾಟಿಪಳ್ಳ, ಟ್ರಸ್ಟ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಕಲಾವಿದ ವಾದಿರಾಜ ಕಲ್ಲೂರಾಯ ಅವರು ಅಭಿನಂದನಾ ಭಾಷಣ ಗೈದರು. ಅಭಿನೇತ್ರಿ ರಾವ್ ಅವರು ಸಹಕರಿಸಿದರು.