ಬಳ್ಳಾರಿ : ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಪೈಕಿ ನಾಲ್ವರು ಆರೋಪಿಗಳನ್ನು ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಧನಂಜಯ್, ಮೈಲಾರಿ ಅಲಿಯಾಸ್ ವಿಜಯ್, ಸಲೀಂ, ಭೀಮ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಲೀಲಾವತಿ ಆಸ್ಪತ್ರೆಯ ಮುಂಭಾಗ ತಡರಾತ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.