ಬೆಂಗಳೂರು: ಲಾಡ್ಜ್ ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಯುವಕ-ಯುವತಿ ಮೃತಪಟ್ಟಿರುವ ಘಟನೆ ಯಲಹಂಕ ನ್ಯೂಟೌನ್ ಠಾಣೆ ವ್ಯಾಪ್ತಿಯ ಕಿಚನ್ ಸಿಕ್ಸ್ ಫ್ಯಾಮಿಲ್ ರೆಸ್ಟೊರೆಂಟ್ ಕಟ್ಟಡದಲ್ಲಿ ಗುರುವಾರ(ಅ.9) ಸಂಜೆ 6.30 ಸುಮಾರಿಗೆ ಘಟನೆ ನಡೆದಿದೆ.
ಗದಗ ಮೂಲದ ರಮೇಶ್ (25) ಮತ್ತು ಹುನಗುಂದ ಮೂಲದ ಕಾವೇರಿ ಬಡಿಗೇರ್ (22) ಅಗ್ನಿ ದುರಂತದಲ್ಲಿ ಮೃತಪಟ್ಟವರು. ಮೃತಪಟ್ಟ ಪ್ರೇಮಿಗಳಿಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಇಬ್ಬರೂ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಿಚನ್-6 ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದ ಮೂರನೇ ಮಹಡಿಯಲ್ಲಿರುವ ಲಾಡ್ಜ್ಗೆ ಬಂದಿದ್ದರು. ಲಾಡ್ಜ್ ನಲ್ಲಿ ಯುವಕ-ಯುವತಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ರಮೇಶ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ.
ಸದ್ಯ ಇದು ಆತ್ಮಹತ್ಯೆನಾ ಅಥವಾ ಬೆಂಕಿಯ ಅವಘಡದಿಂದ ನಡೆದಿರೋದಾ ಎಂದು ಯಲಹಂಕ ನ್ಯೂ ಟೌನ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.