ಉಡುಪಿ: ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಾಮೀನು ಷರತ್ತುಗಳನ್ನು ಪಾಲಿಸದ ಕಾರಣ ಉಡುಪಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತೀರ್ಪು ನೀಡಿದೆ.
ನಗರ ಠಾಣೆಯ ಪೊಲೀಸರು ಸಾಮಾಜಿಕ ಜಾಲತಾಣ ವೀಕ್ಷಣೆ ಮಾಡುತ್ತಿರುವ ಸಂದರ್ಭದಲ್ಲಿ ಆರೋಪಿಯು ಆಧಾರರಹಿತವಾಗಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ್ದ. ಇದು ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆಯ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.