ರಾಯ್ಪುರ: ಕೃತಕ ಬುದ್ಧಿಮತ್ತೆ (AI ) ಪರಿಕರಗಳನ್ನು ಬಳಸಿಕೊಂಡು 36ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ಚಿತ್ರಗಳನ್ನು ರಚಿಸಿದ ಆರೋಪದ ಮೇಲೆ ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿರುವ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ (IIIT)ಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿ ಸಯ್ಯದ್ ರಹೀಮ್ ಅದ್ನಾನ್ ಅಲಿ (21) ಎಂಬಾತ ಬಂಧಿತ ಆರೋಪಿ.
ಸಂಸ್ಥೆಯ ರಿಜಿಸ್ಟ್ರಾರ್ ಡಾ. ಶ್ರೀನಿವಾಸ ಕೆ ಜಿ ಅವರು ದಾಖಲಿಸಿದ ದೂರಿನ ಮೇರೆಗೆಆರೋಪಿ ವಿದ್ಯಾರ್ಥಿಯನ್ನು ಆತನ ಹುಟ್ಟೂರು ಬಿಲಾಸ್ಪುರ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ನವ ರಾಯ್ಪುರ) ವಿವೇಕ್ ಶುಕ್ಲಾ ತಿಳಿಸಿದ್ದಾರೆ.
“ವಿದ್ಯಾರ್ಥಿಗಳಿಂದ ದೂರುಗಳು ಬಂದ ನಂತರ ಸಂಸ್ಥೆಯ ಆಡಳಿತ ಮಂಡಳಿಯು ಆಂತರಿಕ ವಿಚಾರಣೆ ನಡೆಸಿದೆ. ಅದರ ಆಧಾರದ ಮೇಲೆ, ಆರೋಪಿ ಅಲಿಯನ್ನು ಸಂಸ್ಥೆಯಿಂದ ಅಮಾನತುಗೊಳಿಸಲಾಗಿದೆ. ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.