ಮಂಗಳೂರು: ಕರ್ನಾಟಕ ರಾಜ್ಯ ಕಂಬಳ ಅಸೋಷಿಯೇಶನ್(ರಿ,) ಮಂಗಳೂರು ಅಸ್ತಿತ್ವಕ್ಕೆ ಬಂದಿದ್ದು, ಅನುಮೋದನೆಗೊಂಡಿರುವ ಸಮಿತಿಯ ಪದಾಧಿಕಾರಿಗಳ ಪಟ್ಟೆ ಬಿಡುಗಡೆಗೊಂಡಿದೆ. ಅಧ್ಯಕ್ಷರಾಗಿ ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಲೋಕೇಶ್ ಶೆಟ್ಟಿ ಕಲ್ಕುಡೆ ಮುಚ್ಚೂರು ಆಯ್ಕೆಯಾಗಿದ್ದಾರೆ.
ಉಳಿದಂತೆ ಗೌರವ ಸಲಹೆಗಾರರಾಗಿ ಡಾ. ಜೀವಂಧರ್ ಬಲ್ಲಾಳ್ ಕಾಂತಾವರ, ಜೀವನ್‌ದಾಸ್ ಅಡ್ಯಂತಾರು, ಗುಣಪಾಲ್ ಕದಂಬ, ಉಪಾಧ್ಯಕ್ಷರಾಗಿ ನವೀನ್ ಚಂದ್ರ ಆಳ್ವ ತಿರುವೈಲುಗುತ್ತು, ಕಾರ್ಯದರ್ಶಿಯಾಗಿ ವಿಜಯಕುಮಾರ್ ಹೊಸ್ಮಾರು ಆಯ್ಕೆಯಾಗಿದ್ದಾರೆ. ಅಲ್ಲದೆ ಕಾರ್ಯಕಾರಿ ಸಮಿತಿ ಸದಸ್ಯರು, ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಗಿದೆ.