ಪಿಟಿಐ ಕಚೇರಿಗೆ ಬಾಂಬ್ ಬೆದರಿಕೆ

ಚೆನ್ನೈ: ಚೆನ್ನೈನಲ್ಲಿರುವ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಕಚೇರಿಗೆ ಶುಕ್ರವಾರ(ಅ.10) ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಆದರೆ, ಈ ಬೆದರಿಕೆಯ ಮೂಲದ ಕುರಿತು ಯಾವುದೇ ಮಾಹಿತಿ ಬಹಿರಂಗಗೊಳಿಸದ ಪೊಲೀಸರು, ಕೊಡಂಬಾಕ್ಕಂನಲ್ಲಿರುವ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಕಚೇರಿಯಲ್ಲಿ ತಪಾಸಣೆ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದರ ಬೆನ್ನಿಗೇ, ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಕಚೇರಿಗೆ ಆಗಮಿಸಿದ ಪೊಲೀಸ್ ತಂಡವೊಂದು, ಕಚೇರಿಯಲ್ಲಿದ್ದ ಸಿಬ್ಬಂದಿಗಳನ್ನು ತೆರವುಗೊಳಿಸಿದೆ.

error: Content is protected !!