ಬೆಳ್ತಂಗಡಿ: ಪ್ರಯಾಣಿಕನಿಗೆ ಹಲ್ಲೆಗೈದ ಲೇಡಿ ಕಂಡಕ್ಟರ್!

ಮಂಗಳೂರು: ಪ್ರಯಾಣಿಕನ ಮೇಲೆ ಲೇಡಿ ಬಸ್ ಕಂಡಕ್ಟರ್ ಹಲ್ಲೆಗೈದ ಘಟನೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ.
ಮೂಡಿಗೆರೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್ ನಲ್ಲಿ ಘಟನೆ ನಡೆದಿದ್ದು ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಬಸ್ ನಲ್ಲಿ ಕಂಡಕ್ಟರ್ ಮತ್ತು ಪ್ರಯಾಣಿಕನ ಮಧ್ಯೆ ಗಲಾಟೆಯಾಗಿದೆ. ಈ ವೇಳೆ ಕಂಡಕ್ಟರ್ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿರುವ ಆರೋಪ ವ್ಯಕ್ತವಾಗಿದೆ.
ಈ ಘಟನೆಯಿಂದಾಗಿ ಬಸ್ ನಲ್ಲಿದ್ದ ಪ್ರಯಾಣಿಕರು ಕಂಗಾಲಾಗಿದ್ದು ಪೊಲೀಸರ ಮಧ್ಯೆ ಪ್ರವೇಶದಿಂದಾಗಿ ಪ್ರಕರಣ ಠಾಣೆಯ ಮೆಟ್ಟಿಲೇರಿದೆ.
ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಟಿಸಿ ಬದಲಿ ಬಸ್ ವ್ಯವಸ್ಥೆ ಮಾಡಿದ್ದು ಕಂಡಕ್ಟರ್ ಮತ್ತು ಪ್ರಯಾಣಿಕನನ್ನು ಠಾಣೆಗೆ ಕರೆತಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

error: Content is protected !!