ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಕಾವೂರು ಬಳಿ ಶುಕ್ರವಾರ(ಅ.10) ತಡರಾತ್ರಿ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪಾರಾಗಿದ್ದಾನೆ.
ಘಟನೆ ನಡೆದ ಕೆಲವೇ ಹೊತ್ತಿನ ಬಳಿಕ ಮಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.