ಕಾರ್ಕಳ: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ 17 ವಯೋಮಿತಿಯ ಪ್ರೌಢಶಾಲಾ ಬಾಲಕ/ಬಾಲಕಿಯರ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆ 2025-26ರಲ್ಲಿ ಎಸ್.ವಿ.ಟಿ. ವನಿತಾ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮ ಪ್ರೌಢಶಾಲಾ ವಿಭಾಗದ 9ನೇ ತರಗತಿಯ ವಿದ್ಯಾರ್ಥಿನಿ ಧನ್ಯಶ್ರೀ 48 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ದುರ್ಗ ಗ್ರಾಮದ ಸವಿತಾ ನಾಯ್ಕ್ ಮತ್ತು ಸಂತೋಷ್ ನಾಯ್ಕ್ ಅವರ ಪುತ್ರಿ.